ಇಂದು ಎನಗೆ ಗೋವಿಂದ ನಿನ್ನಯ ಪಾದಾರವಿಂದವ
ತೋರೋ ಮುಕುಂದನೇ ಮುಕುಂದನೇ/
ಸುಂದರ ವದನನೆ ನಂದಗೋಪನ ಕಂದ
ಮಂದರೋದ್ಧಾರ ಆನಂದ ಇಂದಿರಾ ರಮಣನೆ//
ನೊಂದೆನಯ್ಯಾ ಭವಬಂಧನದೊಳು ಸಿಲುಕಿ
ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು
ಕಂದನೆಂದೆನ ಕುಂದಗಳೆಣಿಸದೆ
ತಂದೆ ಕಾಯೋ ಕೃಷ್ಣ ಕಂದರ್ಪ ಜನಕೆ//
ಮೂಢತನದಿ ಬಲು ಹೇಡಿಜೀವನಾಗಿ
ದೃಢಭಕ್ತಿಯನ್ನು ಮಾಡಲಿಲ್ಲವೋ ಹರಿಯೇ
ನೋಡಲಿಲ್ಲವೋ ನಿನ್ನ ಪಾಡಲಿಲ್ಲವೋ ಮಹಿಮೆ
ಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ//
ಧಾರುಣಿಯೊಳು ಭೂಭಾರ ಜೀವನಾನಾಗಿ
ದಾರಿತಪ್ಪಿ ನಡೆದೆ ಸೇರಿದೆ ಕುಜನರ
ಆರೂ ಕಾಯುವವರಿಲ್ಲ ಸೇರಿದೆ ನಿನಗಯ್ಯಾ
ಧೀರವೇಣುಗೋಪಾಲ ಪಾರುಗಾಣಿಸೋ ಹರಿಯೇ//
ತೋರೋ ಮುಕುಂದನೇ ಮುಕುಂದನೇ/
ಸುಂದರ ವದನನೆ ನಂದಗೋಪನ ಕಂದ
ಮಂದರೋದ್ಧಾರ ಆನಂದ ಇಂದಿರಾ ರಮಣನೆ//
ನೊಂದೆನಯ್ಯಾ ಭವಬಂಧನದೊಳು ಸಿಲುಕಿ
ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು
ಕಂದನೆಂದೆನ ಕುಂದಗಳೆಣಿಸದೆ
ತಂದೆ ಕಾಯೋ ಕೃಷ್ಣ ಕಂದರ್ಪ ಜನಕೆ//
ಮೂಢತನದಿ ಬಲು ಹೇಡಿಜೀವನಾಗಿ
ದೃಢಭಕ್ತಿಯನ್ನು ಮಾಡಲಿಲ್ಲವೋ ಹರಿಯೇ
ನೋಡಲಿಲ್ಲವೋ ನಿನ್ನ ಪಾಡಲಿಲ್ಲವೋ ಮಹಿಮೆ
ಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ//
ಧಾರುಣಿಯೊಳು ಭೂಭಾರ ಜೀವನಾನಾಗಿ
ದಾರಿತಪ್ಪಿ ನಡೆದೆ ಸೇರಿದೆ ಕುಜನರ
ಆರೂ ಕಾಯುವವರಿಲ್ಲ ಸೇರಿದೆ ನಿನಗಯ್ಯಾ
ಧೀರವೇಣುಗೋಪಾಲ ಪಾರುಗಾಣಿಸೋ ಹರಿಯೇ//
No comments:
Post a Comment