Tuesday, February 5, 2013

ತಾರಕ್ಕ ಬಿಂದಿಗೆ ನಾ ನೀರಿಗೆ ಹೋಗುವೆ

ತಾರಕ್ಕ ಬಿಂದಿಗೆ ನಾ ನೀರಿಗೆ ಹೋಗುವೆ ತಾರೇ ಬಿಂದಿಗೆಯ

ಬಿಂದಿಗೆ ಒಡೆದರೆ ಒಂದೇ ಕಾಸು ತಾರೇ ಬಿಂದಿಗೆಯ//



ರಾಮನಾಮವೆಂಬ ರಸವುಳ್ಳ ನೀರಿಗೆ ತಾರೇ ಬಿಂದಿಗೆಯ

ಕಾಮಿನಿಯರ ಕೂಡೆ ಏಕಾಂತವಾಡೆನು ತಾರೇ ಬಿಂದಿಗೆಯ//



ಗೋವಿಂದ ನೀರಿಗೆ ಗುಣವುಳ್ಳ ನೀರಿಗೆ ತಾರೇ ಬಿಂದಿಗೆಯ

ಆವಾವ ಪರಿಯಲ್ಲಿ ಅಮೃತದ ನೀರಿಗೆ ತಾರೇ ಬಿಂದಿಗೆಯ//



ಬಿಂದುಮಾಧವನ ಘಟ್ಟಕ್ಕೆ ಹೋಗುವ ತಾರೇ ಬಿಂದಿಗೆಯ

ಪುರಂದರ ವಿಠಲಗೆ ಅಭಿಷೇಕ ಮಾಡುವ ತಾರೇ ಬಿಂದಿಗೆಯ//

No comments:

Post a Comment