ಮನ್ನಾರು ಕೃಷ್ಣಗೆ ಮಂಗಳ
ಜಗವ ಮನ್ನಿಸಿದೊಡೆಯಗೆ ಮಂಗಳ//ಪ//
ಬೊಮ್ಮನ ಪಡೆದಗೆ ಭಕ್ತರುದ್ಧಾರಿಗೆ
ಕಮ್ಮಗೋಲನಯ್ಯಗೆ ಮಂಗಳ
ಧರ್ಮರಕ್ಷಕನಿಗೆ ದಾನವಶಿಕ್ಷಗೆ
ನಮ್ಮ ರಕ್ಷಕನಿಗೆ ಮಂಗಳ //
ತುರುಗಳ ಕಾಯ್ದಗೆ ಕರುಣಾಕರನಿಗೆ
ಗಿರಿಯನೆತ್ತಿದವಗೆ ಮಂಗಳ
ವರದ ತಿಮ್ಮಪ್ಪಗೆ ವಾರಿಜನಾಭಗೆ
ಹರಿ ಸರ್ವೋತ್ತಮನಿಗೆ ಮಂಗಳ//
ದೇವಕಿದೇವಿಯ ತನಯಗೆ ಮಂಗಳ
ದೇವ ತಿಮ್ಮಪ್ಪಗೆ ಮಂಗಳ
ಮಾವನ ಕೊಂದು ಮಲ್ಲರ ಮಡುಹಿದ
ಪುರಂದರವಿಠಲಗೆ ಮಂಗಳ//
ಜಗವ ಮನ್ನಿಸಿದೊಡೆಯಗೆ ಮಂಗಳ//ಪ//
ಬೊಮ್ಮನ ಪಡೆದಗೆ ಭಕ್ತರುದ್ಧಾರಿಗೆ
ಕಮ್ಮಗೋಲನಯ್ಯಗೆ ಮಂಗಳ
ಧರ್ಮರಕ್ಷಕನಿಗೆ ದಾನವಶಿಕ್ಷಗೆ
ನಮ್ಮ ರಕ್ಷಕನಿಗೆ ಮಂಗಳ //
ತುರುಗಳ ಕಾಯ್ದಗೆ ಕರುಣಾಕರನಿಗೆ
ಗಿರಿಯನೆತ್ತಿದವಗೆ ಮಂಗಳ
ವರದ ತಿಮ್ಮಪ್ಪಗೆ ವಾರಿಜನಾಭಗೆ
ಹರಿ ಸರ್ವೋತ್ತಮನಿಗೆ ಮಂಗಳ//
ದೇವಕಿದೇವಿಯ ತನಯಗೆ ಮಂಗಳ
ದೇವ ತಿಮ್ಮಪ್ಪಗೆ ಮಂಗಳ
ಮಾವನ ಕೊಂದು ಮಲ್ಲರ ಮಡುಹಿದ
ಪುರಂದರವಿಠಲಗೆ ಮಂಗಳ//
No comments:
Post a Comment