ಯಾದವರಾಯ ಬೃಂದಾವನದೊಳು
ವೇಣು ನಾದವ ಮಾಡುತಿರೆ//ಪ//
ರಾಧಾ ಮುಂತಾದ ಗೋಪಿಯರೆಲ್ಲ
ಮಧುಸೂದನ ನಿನ್ನನು ಸೇವಿಸುತಿರೆ
ಸುರರು ಅಂಬರದಿ ಸಂದಣಿಸಿರೆ
ಅಪ್ಸರ ಸ್ತ್ರೀಯರು ಮೈ ಮರೆತಿರೇ//ಅಪ//
ಕರದಲಿ ಕೊಳಲನು ಊದುತ ಪಾಡುತ
ಸ ರಿ ಗ ಮ ಪ ದ ನಿ ಸ್ವರಗಳ ನುಡಿಸುತ
ಹರಿ ಹರ ಬ್ರಹ್ಮರು ನಲಿದಾಡುತಿರೆ
ತುಂಬುರು ನಾರದರು ಪಾಡುತಿರೆಚರಣ
ಕರುಗಳ ಸಹಿತಲೇ ಗೋಕುಲವೆಲ್ಲಸಿರಿ ಕಾಗಿನೆಲೆಯಾದಿ ಕೇಶವ ರಾಯ
ತರುಗಳ ಸಹಿತಲೇ ವರಗೋಪಾಲಚರಣ
No comments:
Post a Comment