ರಾಮ ಮಂತ್ರವ ಜಪಿಸೋ ಹೇ ಮನುಜ||ಪ||
ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡಬೇಡಸೋಮಶೇಖರ ತನ್ನ ಭಾಮೆಗೆ ಪೇಳಿದ ಮಂತ್ರ||ಅಪ||
ಕುಲಹೀನನಾದರು ಕೂಗಿ ಜಪಿಸುವ ಮಂತ್ರ
ಸಲೆ ಬೀದಿ ಬೀದಿಯೊಳು ನುಡಿವ ಮಂತ್ರ
ಹಲವು ಪಾಪಂಗಳ ಹತಗೊಳಿಸುವ ಮಂತ್ರ
ಸುಲಭದಿಂದಲಿ ಸ್ವರ್ಗ ಸೂರೆಗೊoಬುವ ಮಂತ್ರ
ಜ್ಞಾನನಿಧಿ ನಮ್ಮ ಆನಂದತೀರ್ಥರು
ಸಾನುರಾಗದಿ ನಿತ್ಯ ಸೇವಿಪ ಮಂತ್ರ
ಭಾನುಕುಲಾಂಬುಧಿ ಸೋಮನೆನಿಪ ನಮ್ಮ
ದೀನರಕ್ಷಕ ಪುರಂದರವಿಠಲನ ಮಂತ್ರ
ಸಾನುರಾಗದಿ ನಿತ್ಯ ಸೇವಿಪ ಮಂತ್ರ
ಭಾನುಕುಲಾಂಬುಧಿ ಸೋಮನೆನಿಪ ನಮ್ಮ
ದೀನರಕ್ಷಕ ಪುರಂದರವಿಠಲನ ಮಂತ್ರ
No comments:
Post a Comment