ಕೈಲಾಸ ವಾಸ ಗೌರೀಶ ಈಶ
ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ||ಪ||
ಅಹೋರಾತ್ರಿಯಲ್ಲಿ ನಾನು ಅನುಜರಾಗ್ರಣಿಯಾಗಿ
ಮಹಿಯೊಳಗೆ ಚರಿಸಿದೆನೋ ಮಹದೇವನೇ
ಅಹಿಭೂಷಣನೆ ಎನ್ನ ಅವಗುಣಗಳೆಣಿಸದಲೇ
ವಿಹಿತಧರ್ಮದಲಿಡು ವಿಷ್ಣು ಭಕುತಿಯನು ಕೊಡು ಶಂಭೋ||
ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ||ಪ||
ಅಹೋರಾತ್ರಿಯಲ್ಲಿ ನಾನು ಅನುಜರಾಗ್ರಣಿಯಾಗಿ
ಮಹಿಯೊಳಗೆ ಚರಿಸಿದೆನೋ ಮಹದೇವನೇ
ಅಹಿಭೂಷಣನೆ ಎನ್ನ ಅವಗುಣಗಳೆಣಿಸದಲೇ
ವಿಹಿತಧರ್ಮದಲಿಡು ವಿಷ್ಣು ಭಕುತಿಯನು ಕೊಡು ಶಂಭೋ||
ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ
ಧನುಜಗತ ಮದಹಾರಿ ದಂಡ ಪ್ರಣಾಮವ ಮಾಡ್ಪೆ
ಮಣಿಸು ಈ ಶಿರವ ಸಜ್ಜನ ಚರಣ ಕಮಲದಲ್ಲಿ ಶಂಭೋ||
ಭಾಗೀರಥಿಧರನೆ ಭಯವ ಪರಿಹರಿಸಯ್ಯ
ಲೇಸಾಗಿ ನೀ ಸಲಹೊ ಸಂತತ ಸರ್ವದೇವ
ಭಾಗವತಗಳ ಪ್ರಿಯ ವಿಜಯ ವಿಠಲನಂಘ್ರಿ
ಜಾಡು ಮಾಡದೆ ಭಜಿಪ ಭಾಗ್ಯವನು ಕೊಡು ಶಂಭೋ||
ಲೇಸಾಗಿ ನೀ ಸಲಹೊ ಸಂತತ ಸರ್ವದೇವ
ಭಾಗವತಗಳ ಪ್ರಿಯ ವಿಜಯ ವಿಠಲನಂಘ್ರಿ
ಜಾಡು ಮಾಡದೆ ಭಜಿಪ ಭಾಗ್ಯವನು ಕೊಡು ಶಂಭೋ||
No comments:
Post a Comment