Monday, May 20, 2013

ಮೂರುತಿಯೆನೆ ನಿಲ್ಲಿಸೋ


ಮೂರುತಿಯೆನೆ ನಿಲ್ಲಿಸೋ , ಮಾಧವ ನಿನ್ನ
ಮೂರುತಿಯೆನೆ ನಿಲ್ಲಿಸೋ ||||

ಎಳೆ ತುಳಸಿಯ ವನಮಾಲೆಯು ಕೊರಳೊಳು
ಹೊಳೆವ ಪೀತಾಂಬರದಿಂದಲೊಪ್ಪುವ ನಿನ್ನ ||

ಮುತ್ತಿನ ಸರ ನವರತ್ನದುಂಗುರವಿಟ್ಟು
ಮತ್ತೆ ಶ್ರೀ ಲಕುಮಿಯ ಉರದೊಳೊಪ್ಪುವ ನಿನ್ನ||

ಭಕ್ತರ ಕಲ್ಪತರು ಭಾಗ್ಯದ ಸುರಧೇನು
ಮುಕ್ತಿದಾಯಕ ಸಿರಿ ಪುರಂದರ ವಿಠಲ ನಿನ್ನ||

No comments:

Post a Comment