Monday, May 20, 2013

ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ


ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ

ಮತ್ಸ್ಯಾವತಾರಗೆ ಮಂದರೋದ್ಧಾರಗೆ ಅಚ್ಚರಿಯಿಂದ ಭೂಮಿ ತಂದವಗೆ
ಹೆಚ್ಚಾದ ಉಕ್ಕಿನ ಕಂಭದಿಂದಲಿ ಬಂದ ಲಕ್ಷ್ಮೀ ನರಸಿಂಹಗಾರತಿ ಎತ್ತಿರೆ||

ವಾಮನ ರೂಪಲಿ ದಾನ ಬೇಡಿದವಗೆ ಪ್ರೇಮದಿ ಕೊಡಲಿಯ ಪಿಡಿದವಗೆ
ರಾಮಚಂದ್ರನಾಗಿ ದಶ ಶಿರನನು ಕೊಂದ ಸ್ವಾಮಿ ಶ್ರೀ ಕೃಷ್ಣಗಾರತಿ ಎತ್ತಿರೆ||

ಬತ್ತಲೆ ನಿಂತಗೆ ಬೌದ್ಧಾವತಾರಗೆ ಉತ್ತಮ ಅಶ್ವನೇರಿದಗೆ
ಭಕ್ತರ ಸಲಹುವ ಪುರಂದರ ವಿಠಲಗೆ ಮುತ್ತೈದೆಯರಾರತಿ ಎತ್ತಿರೆ||
ಆನಂದಮಯಗೆ ಚಿನ್ಮಯಗೆ
ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ

ವೇದವ ತಂದು ಬೆಟ್ಟವ ಪೊತ್ತು ಧರಣೀಯ
ಸಾಧಿಸಿ ಕಂಭದಿ ಬಂದವಗೆ
ಭೂದಾನವ ಬೇಡಿ ನೃಪರ ಸಂಹರಿಸಿದ
ಆದಿ ಮೂರುತಿಗೆ ಆರತಿ ಎತ್ತಿರೆ||

ಇಂದುವದನೆ ಸೀತೆ ಸಹಿತಲರಣ್ಯದಿ
ನಂದಗೋಕುಲದಲ್ಲಿ ನಲಿದವಗೆ
ಮಂದಗಮನೆಯರ ಮುಂದೆ ನಿರ್ವಾಣದಿ
ನಿಂದ ಮೂರುತಿಗೆ ಆರತಿ ಎತ್ತಿರೆ||

ತುರಗವನೇರಿ ದೈತ್ಯರ ಸೀಳಿ ಸುಜನರ
ಪೊರೆವ ಮಂಗಳ ಹಯವದನನಿಗೆ
ವರದ ಯಾದವಗಿರಿ ಆದಿ ನಾರಾಯಣ
ಚರಣ ಕಮಲಕೆ ಆರತಿ ಎತ್ತಿರೆ||

No comments:

Post a Comment