Thursday, May 9, 2013

ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ

ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ
ಎಲ್ಲಿಲ್ಲಿ ನೋಡಿದರೂ ಅಲ್ಲಿ ಶ್ರೀರಾಮ||||

ರಾವಣನ ಮೂಲಬಲ ಕಂಡು ಕಪಿಸೇನೆ
ಆವಾಗಲೇ ಬೆದರಿ ಓಡಿದವು
ಈವೇಳೆ ನರನಾಗಿ ಇರಬಾರದೆಂದೆಣಿಸಿ
ದೇವ ರಾಮಚಂದ್ರ ಜಗವೆಲ್ಲ ತಾನಾದ||

ಅವನಿಗೆ ಇವ ರಾಮ ಇವನಿಗೆ ಅವ ರಾಮ
ಅವನಿಯೊಳೀಪರಿರುಪ ಉಂಟೆ
ಲವ ಮಾತ್ರದಿ ಅಸುರ ದುರುಳರೆಲ್ಲರು
ಅವರವರು ಹೊಡೆದಾಡಿ ಹತರಾಗಿ ಹೋದರು ||
ಹನುಮದಾದಿ ಸಾಧು ಜನರು ಅಪ್ಪಿಕೊಂಡು
ಕುಣಿಕುಣಿದಾಡಿದರು ಹರುಷದಿಂದ
ಕ್ಷಣದಲ್ಲಿ ಪುರಂದರ ವಿಠಲರಾಯನು
ಕೊನೆಗೊಡೆಯನು ತಾನೊಬ್ಬನಾಗಿ ನಿಂತ||

No comments:

Post a Comment