ಕಂಡೆ
ಕಂಡೆ ಸ್ವಾಮಿಯ ಬೇಡಿಕೊಂಡೆ ||
ಕಂಡೆ
ತಿರುಪತಿ ವೆಂಕಟೇಶನ ಕಾರಣಾತ್ಮಕ ಸಾರ್ವಭೌಮನ
ಕಾಮಿತಾರ್ಥಗಳೀವ
ದೇವನ ಕರುಣಾನಿಧಿ ಎಂದೆನಿಸಿ ಮೆರೆವನ ||
ಕೋಟಿಸೂರ್ಯ
ಪ್ರಕಾಶವೆನಿಪ ಕಿರೀಟವನು ಮಸ್ತಕದಿ ಕಂಡೆನು
ನೋಟಕಾಶ್ಚರ್ಯವಾದ
ನಗೆಮುಖನೊಸಲಿನಲಿ ತಿರುಮಣಿಯ ಕಂಡೆನು
ಸಾಟಿಯಿಲ್ಲದೆ
ಚತುರ ಹಸ್ತದಿ ಶಂಖಚಕ್ರಗದಾಬ್ಜ ಕಂಡೆನು
ಬೂಟಕದ
ಮಾತಲ್ಲ ಕೇಳಿರೋ ಭೂರಿದೈವರ ಗಂಡನಂಘ್ರಿಯ||
ತಪ್ಪುಕಾಣಿಕೆ
ಕಪ್ಪವನು ಸಮಸ್ತದ್ವೀಪಗಳಿಂದಲಿ ತರಿಸುವ
ಉಪ್ಪು
ಓಗರಗಳನೆ ಮಾರಿಸಿ ಉಚಿತದಿಂದಲಿ ಹಣವ
ಗಳಿಸುವ
ಇಪ್ಪತ್ತು
ದುಡ್ಡಿಗೆ ಸೇರು ತೀರ್ಥ ಒಪ್ಪದಲಿ
ಕ್ರಯ ಮಾಡಿ ಕೊಡಿಸುವ
ಸರ್ಪಶಯನ
ಸಾರ್ವಭೌಮನ ಅಪ್ಪ ವೆಂಕಟರಮಣನಂಘ್ರಿಯ ||
ಉರದಿ
ಶ್ರೀ ದೇವಿಯಳ ಕಂಡೆನು ಉನ್ನತದ
ಕೌಸ್ತುಭವ ಕಂಡೆನು
ಗರುಡ
ಕಿನ್ನರನಾರದಾದಿ ಗಂಧರ್ವರ ಎಡಬಲದಲಿ ಕಂಡೆನು
ತರತರದಿ
ಭಕ್ತರಿಗೆ ವರಗಳ ಕರೆದು ಕೊಡುವುದ
ನಿರತ ಕಂಡೆನು
ಶರಧಿಶಯನನ
ಶೇಷಗಿರಿಯ ವರದ ಪುರಂದರವಿಠಲನಂಘ್ರಿಯ ||
No comments:
Post a Comment