Monday, January 19, 2015

ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ.

ಇಂದು ದಾಸ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ. 
 
 ಕಂಡೆ ನಾ ಗೋವಿಂದನ
ಪುಂಡರೀಕಾಕ್ಷ ಪಾಂಡವಪಕ್ಷ ಕೃಷ್ಣನ ।।
ಕೇಶವ ನಾರಾಯಣ ಶ್ರೀಕೃಷ್ಣನ
ವಾಸುದೇವ ಅಚ್ಚುತಾನಂತನ  ।।೧।।
ಸಾಸಿರ ನಾಮದ ಶ್ರೀ ಹೃಷೀಕೇಶನ
ಶೇಷಶಯನ ನಮ್ಮ ವಸುದೇವ ಸುತನ
ಮಾಧವ ಮಧುಸೂದನ ತ್ರಿವಿಕ್ರಮನ ಯಾದವಕುಲವಂದ್ಯನ 
ವೇದಾಂತ ವೇದ್ಯನ ಇಂದಿರಾರಮಣನ ।।೨।।
ಆದಿಮೂರುತಿ ಪ್ರಹ್ಲಾದವರದನ
ಪುರುಷೋತ್ತಮ ನರಹರಿ ಶ್ರೀ ಕೃಷ್ಣನ
ಶರಣಾಗತ ರಕ್ಷಕನ ಕರುಣಾಕರ ನಮ್ಮ ಪುರಂದರವಿಠಲನ
                                                       ನೆರೆನಂಬಿದನು ಬೇಲೂರ ಚೆನ್ನಿಗನ ।।೩।।

No comments:

Post a Comment