Wednesday, April 3, 2013
ಲಾಲಿಸಿದಳು ಮಗನ ಯಶೋದೆ
ಲಾಲಿಸಿದಳು ಮಗನ ಯಶೋದೆ
ಲಾಲಿಸಿದಳು ಮಗನ//
ಅರಳೆಲೆ ಮಾಗಾಯಿ ಬೆರಳಿಗುಂಗುರವಿಟ್ಟು
ತರಳನ ಮೈಸಿರಿ ತರುಣಿ ನೋಡುತ ಹಿಗ್ಗಿ//
ಬಾಲಕನೆ ಕೆನೆ ಹಾಲು ಮೊಸರನೀವೇ
ಲೀಲೆಯಿಂದಲಿ ಎನ್ನ ತೋಳ ಮೇಲೆ ಮಲಗೆಂದು//
ಮುಗುಳುನಗೆಯಿಂದ ಮುದ್ದು ತಾತಾರೆಂದು
ಜಗದೊಡೆಯನೆ ಶ್ರೀಪುರಂದರ ವಿಠಲನ//
No comments:
Post a Comment
Newer Post
Older Post
Home
View mobile version
Subscribe to:
Post Comments (Atom)
No comments:
Post a Comment